Home ಸ್ಥಳೀಯ ಸಮಾಚಾರ ಧರ್ಮಸ್ಥಳ; ಹದಗೆಟ್ಟ  ಅಜಿಕುರಿ ರಸ್ತೆ‌, ದುರಸ್ತಿಗೆ ಒತ್ತಾಯಿಸಿ ಜು.7 ಪ್ರತಿಭಟನೆ

ಧರ್ಮಸ್ಥಳ; ಹದಗೆಟ್ಟ  ಅಜಿಕುರಿ ರಸ್ತೆ‌, ದುರಸ್ತಿಗೆ ಒತ್ತಾಯಿಸಿ ಜು.7 ಪ್ರತಿಭಟನೆ

0
5

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ‌ ನೇತ್ರಾವತಿ‌ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನಗಳ ಹಾಗೂ ಜನರ ಸಂಚಾರ ಅಸಾಧ್ಯವಾಗಿದೆ. ರಸ್ತೆಯಲ್ಲಿ ದೊಡ್ಡ ಹೊಂಡಗಳೇ ಬಿದ್ದಿದ್ದು ಕನಿಷ್ಟ ದುರಸ್ತಿಗೂ ಮುಂದಾಗದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ರಿಕ್ಷಾ ಚಾಲಕರು ಒಟ್ಟಾಗಿ ಜು 7 ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಮಾರ್ಗವಾಗಿ ದಿಡುಪೆ- ಪೈಚಾರು ರಾಜ್ಯಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ
ಕಳೆದ 5 ವರ್ಷಗಳಿಂದ ಸಂಪೂರ್ಣ ಹದಗೆಟ್ಟ ರೀತಿಯಲ್ಲಿದ್ದು ವರ್ಷದ ಹಿಂದೆಯೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಆಗ ಸ್ಥಳೀಯ ಜನಪ್ರತಿನಿಧಿಗಳು ದುರಸ್ತಿ ಮಾಡುವ ಭರವಸೆ ನೀಡಿದ್ದರೂ ಯಾವುದೂ ಈಡೇರಿಲ್ಲ. ರಸ್ತೆಯನ್ನು ದುರಸ್ತಿಮಾಡುವಂತೆ ಸಲ್ಲಿಸಿದ ಮನವಿಗಳು ಯಾವಯದೇ ಪ್ರಯೊಲೋಜಮ ನೀಡಿಲ್ಲ. ಪ್ರತಿನಿತ್ಯ ನೂರಾರು ಮಂದಿ ವಿದ್ಯಾರ್ಥಿಗಳು ಸಾರ್ವಜನಿಕರು ನಡೆದುಕೊಂಡು, ವಾಹನಗಳು ಓಡಾಟ ನಡೆಸುವ ರಸ್ತೆ ಇದಾಗಿದೆ. ನಡೆದುಕೊಂಡು ಹೋಗುವವರು ರಸ್ತೆಯಲ್ಲಿ ಸೃಷ್ಟಿಯಾಗಿರುವ ಹೊಂಡಗಳಿಂದಾಗಿ ಓಡಾಡಲು ಅಸಾದ್ಯವಾಗಿದೆ. ಇಲ್ಲಿ ರಸ್ತೆಯ ಹೊಂಡಗಳಿಗೆ ಬಿದ್ದು ವಾಹನ ಅಪಘಾತಗಳೂ ಸಂಭವಿಸುತ್ತಿದೆ. ಇದೀಗ ಸ್ಥಳೀಯರು ಕನಿಷ್ಟ ಓಡಾಟಕ್ಕೆ ಅನುಕೂಲವಾಗುವ ರೀತಿಯಲ್ಲಾದರೂ ರಸ್ತೆಯನ್ನು ದುರಸ್ತಿಮಾಡಿಕೊಂಡಿ ಎಂದು ಹೋರಾಟಕ್ಕೆ ಮುಂದಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here