
ಪುತ್ತೂರು; ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.
ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.









