
ಮಂಗಳೂರು; ಸುರತ್ಕಲ್ ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಜೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ಬಾಲಕನನ್ನು ಮಾಧವ ಅಮೀನ್ ಎಂಬವರ ಪುತ್ರ, ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಸೂರಿಂಜೆ ಕೋಟೆ ಬೊಳ್ಳಾರು ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಬುಧವಾರ ಸಂಜೆ ಸೂರಿಂಜೆ ಮೈದಾನದಲ್ಲಿ ತನ್ನ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ಮಧ್ಯೆ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.
ಕೂಡಲೇ ಆತನನ್ನು ಗಮನಿಸಿದ ಶಾಲೆಯ ಅಧ್ಯಾಪಕರು, ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.










