Home ಅಪಘಾತ ಬೆಳ್ತಂಗಡಿ; ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

ಬೆಳ್ತಂಗಡಿ; ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

0
2

ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.
ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52) ಎಂಬವರಾಗಿದ್ದಾರೆ.
ಈತ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಕೆಲಸಕ್ಕೆಂದು ಹೋಗಿದ್ದವರು ಆ 5 ರಂದು ಅಲ್ಲಿಂದ ಮನೆಗೆಂದು ಹೊರಟು ಬಂದಿದ್ದು ಮನೆಗೆ ಬಂದಿರಲಿಲ್ಲ ಇವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ನಾಪತ್ತೆಯಾಗಿದ್ದ ಚಿದಾನಂದ ಯಾನೆ ಉಮೇಶ ಅವರ ಮೃತದೇಹ ಆ 8ರಂದು ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ನದಿ ಬದಿಯಲ್ಲಿ ಪೊದೆಯಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು ಆತನ‌ ಪತ್ನಿಭವಾನಿ ಮೃತದೇಹವನ್ನು ಗುರುತಿಸಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ನೀರಿಗೆ ಕಾಲುಜಾರಿ ಬಿದ್ದು ಅಥವಾ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here