Home ಅಪಘಾತ ಉಜಿರೆ ನೀರಚಿಲುಮೆ ಬೈಕ್ ಬಸ್ ನಡುವೆ  ಭೀಕರ ಅಪಘಾತ ಒರ್ವ ಸ್ಥಳದಲ್ಲಿಯೇ ‌ಸಾವು

ಉಜಿರೆ ನೀರಚಿಲುಮೆ ಬೈಕ್ ಬಸ್ ನಡುವೆ  ಭೀಕರ ಅಪಘಾತ ಒರ್ವ ಸ್ಥಳದಲ್ಲಿಯೇ ‌ಸಾವು

0
3

ಬೆಳ್ತಂಗಡಿ:ನೀರಚಿಲುಮೆಯ ತಿರುವಿನಲ್ಲಿ ಕೆಎಸ್‌ಆರ್ಟಿಸಿ ಬಸ್‌ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆ11 ರಂದು ಬೆಳಗ್ಗೆ ನಡೆದಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್‌ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸೋಮನಾಥ್ (25) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಮಡಂತ್ಯಾರು, ಪಾರೆಂಕಿ ಪಂಗಳ ನಿವಾಸಿ ಗುರುತಿಸಲಾಗಿದೆ.

ಬೈಕ್‌ನಲ್ಲಿ ಸಹಸವಾರ ಭರತ್ ಬಳ್ಳಮಂಜ ಇವರು ಗಂಭೀರವಾಗಿ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಳಿಸಲಾಗಿದೆ. ಇವರು ಮೇಸ್ತ್ರಿ ಕೆಲಸದವರಾಗಿದ್ದು ಧರ್ಮಸ್ಥಳ ಕನ್ಯಾಡಿಯಲ್ಲಿ ಕೆಲಸಕ್ಕದು ಬರುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಪಘಾತದಿಂದಾಗಿ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು.

NO COMMENTS

LEAVE A REPLY

Please enter your comment!
Please enter your name here