Home ಅಪರಾಧ ಲೋಕ ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ; ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ...

ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ; ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ.

1
0

ಬಂಟ್ವಾಳ; ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್‌ ಗಳು ಸೇರಿದಂತೆ ಒಟ್ಟು 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು
ನಾಶೀರ್ ಹುಸೇನ್ (37), ಅಡ್ಯಾರ್ ಮಂಗಳೂರು.
ಮಹಮ್ಮದ್ ಜುನೈದ್ (38), ಗೋಳ್ತಮಜಲು, ಬಂಟ್ವಾಳ.
ಮೊಹಮ್ಮದ್ ಅಫ್ರೀದಿ (24), ಕಂಕನಾಡಿ ಮಂಗಳೂರು ಎಂಬವರಾಗಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ: 112/2026, ಕಲಂ: 8(C) ಜೊತೆಗೆ 22(ಸಿ) NARCOTIC DRUGS & PSYCHOTROPIC SUBSTANCES ACT, 1985 Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ ಕೆ.ವಿ, ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ರನ್ನ ಗೌಡ ಎಸ್‌ ಪಾಟೀಲ್, ಹಾಗೂ ಪ್ರೊ. ಪಿ.ಎಸ್‌.ಐ ರವರಾದ ಶಿವರಾಮ್‌, ಫಕೀರಪ್ಪ ಮತ್ತು ಸಿಬ್ಬಂದಿಯವರಾದ ಉದಯ ರೈ, ರಾಧಾಕೃಷ್ಣ ಕೆ , ಪ್ರವೀಣ್‌ ರೈ, ಪ್ರಶಾಂತ್, ಲೋಕೇಶ್‌, ವಿವೇಕ್ ರೈ, ಕುಮಾರ್, ಬಸವರಾಜ್‌, ಶ್ರೀಧರ್‌, ಧನ್ಯಶ್ರೀ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್, ಸಂಪತ್ ರವರು ಕಾರ್ಯಾಚರಣೆಗೆ ಸಹಕರಿಸಿರುತ್ತಾರೆ.

LEAVE A REPLY

Please enter your comment!
Please enter your name here