











ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆಯಲ್ಲಿ ‘ಆಟಿದ ಕಲ’ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.
ಬೆಳಗ್ಗೆ ಸಾಂಪ್ರದಾಯಿಕ ಆಟಿ ತಿಂಗಳ ತಿಂಡಿ-ತಿನಿಸುಗಳ ಸ್ಪರ್ಧೆಗಳ ಉದ್ಘಾಟನೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನೆರವೇರಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಸುಮಾರು 30 ತಂಡಗಳಲ್ಲಿ ಪಾಲ್ಗೊಂಡು ವಿವಿಧ ಬಗೆಯ ಸಾಂಪ್ರದಾಯಿಕ ಆಟಿ ತಿಂಡಿಗಳನ್ನು ತಯಾರಿಸಿ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದ ತಯಾರಿಸಲಾದ ವೈವಿಧ್ಯಮಯ ಸಾಂಪ್ರದಾಯಿಕ ತಿಂಡಿಗಳು ಗಮನ ಸೆಳೆದವು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಕುಶಾಲಪ್ಪ ಗೌಡ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ರವೀಂದ್ರ ಶೆಟ್ಟಿ ಬಳಂಜ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಆಟಿ ತಿಂಗಳ ವಿಶೇಷತೆ, ತುಳುನಾಡಿನಲ್ಲಿ ಆಟಿ ಸಂದರ್ಭದಲ್ಲಿ ಆಚರಿಸಲಾಗುವ ವಿವಿಧ ಆಚರಣೆಗಳು ಹಾಗೂ ಅವುಗಳ ಸಾಂಸ್ಕೃತಿಕ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು
ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಾಗಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಬೆಳ್ತಂಗಡಿಯ ನಿರ್ದೇಶಕಿ ಉಷಾ ದೇವಿ ಕಿನ್ಯಾಜೆ, ನಿವೃತ್ತ ಶಿಕ್ಷಕಿ ಉಮಾ ರಾವ್ ಹಾಗೂ ಗುರುವಾಯನಕೆರೆಯ ಉದ್ಯಮಿ ದೀಪ ಶೆಣೈ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ವಿಷ್ಣು ಪ್ರಕಾಶ್ ಹಾಗೂ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ. ಕಾರ್ಯಕ್ರಮ ನಿರೂಪಿಸಿದರು ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಮೀನಾಕ್ಷಿ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಸಾಂಪ್ರದಾಯಿಕ ಹಾಗೂ ಮನರಂಜನಾ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಎಲ್ಲಾ ಸ್ಪರ್ಧಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿ, ಆಟಿ ತಿಂಗಳ ವಿಶೇಷ ತಿಂಡಿಗಳು ಹಾಗೂ ವಿವಿಧ ಗ್ರಾಮೀಣ ಕ್ರೀಡೆಗಳ ಮೂಲಕ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಅನಾವರಣಗೊಳಿಸಿದರು.





