











ಬೆಳ್ತಂಗಡಿ; ತಾಲೂಕು ಆಡಳಿತ ಬೆಳ್ತಂಗಡಿ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಂಭ್ರಮದಿಂದ ಮಿನಿ ವಿಧಾನ ಸೌಧದ ಆವರಣದಲ್ಲಿ ನಡೆಯಿತು.
ಬೆಳ್ತಂಗಡಿ ತಹಶಿಲ್ದಾರರಾದ ಎಸ್.ಎನ್ ನರಗುಂದ ಅವರು ಧ್ವಜರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟದ ಇತಿಹಾವನ್ನು ನೆನಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿ ಮಾತನಾಡುತ್ತಾ ವಿಕಸಿತ ಭಾರತಸ ಕನಸು ಈಡೇರಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟಸ ಇತಿಹಾಸವನ್ನು ಅರಿತುಕೊಂಡು ಅವರನ್ನು ಅನುಸರಿಸಿ ದೇಶ ಕಟ್ಟುವ ಕಾರ್ಯವನ್ನು ಮಾಡೋಣ ಕೇವಲದೇಶ ಪ್ರೇಮದ ಘೋಷಣೆ, ಸಾಮಾಜಿಕ ಜಾಲತಾಣದ ಪೋಸ್ಟ್ ಮಾತ್ರವಲ್ಲ ಪ್ರತಿಯೊಬ್ಬರೂ ದೇಶದ ಕಾನೂನುಗಳನ್ನು ಪಾಲಿಸಿ ತಮ್ಮ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುವ ಕಾರ್ಯವನ್ನು ಮಾಡಿದಾಗ ಮಾತ್ರ ದೇಶ ಅಭಿವೃದ್ದಿಯಾಗಲು ಸಾಧ್ಯ ಎಂದರು.
ಮುಖ್ಯಭಾಷಣಕಾರರಾಗಿದ್ದ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಮೀನಾಕ್ಷಿ ಎನ್ ಮಾತನಾಡಿ ಸ್ವಾತಂತ್ರ್ಯಹೋರಾಟದ ಇತಿಹಾಸ ಹಾಗೂ ದೇಶದ ಇಂದಿನ ಬೆಖವಣಿಗೆಗಳನ್ನು ವಿವರಿಸಿದರು.
ವೇದಿಕೆಯಲ್ಲಿ
ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್,
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್.ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ, ಮಾಜಿ ಸೈನಿಕ ಗೋಪಾಲಕೃಷ್ಣ ಕಾಂಚೋಡ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಜೋಸೆಫ್
ಅಬಕಾರಿ ಉಪ ನೀರಿಕ್ಷ ಲಕ್ಷ್ಮಣ ಉಪ್ಪಾರ, ಪಿರ್ ಡಿಇ ಎಇಇ ಜರ್ನಾದನ, ಗ್ರಾಮೀಣ ಕುಡಿಯುವ ನೀರು ಮತ್ತು ನೖರ್ಮಲ್ಯ ಇಲಾಖೆಯ ಎಇಇ ತಿರುಪತಿ, ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ಚಂದ್ರಶೇಖರ್, ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಪಶು ವೖದ್ಯಾಧಿಕಾರಿ ಆಡಳಿತ ಡಾ. ರವಿ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್, ಗೃಹ ರಕ್ಷಕದಳದ ಜಯಾನಂದ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮಕ್ಕಳು, ಇಲಾಖಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ. ಆರ್. ಅಂಭೇಡ್ಕರ್ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಲಾಯಿತು.
ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ ಐ ಸಿಕಂದರ್ ಪಾಶಾ ನೇತೃತ್ವದಲ್ಲಿ ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸೌಟ್ಸ್ ಆ್ಯಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಮೂಲಕ ಆಕರ್ಷಕ ಪಥ ಸಂಚಲನ ನಡೆಯಿತು. ಎಸ್ ಎಸ್ ಎಲ್ ಸಿಯಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿ, ಶಿಕ್ಷಕ ಧರ್ಮೇಂದ್ರ ಜೈನ್ ಹಾಗೂ ವಾರಿಜ ನಿರೂಪಿಸಿದರು, ಹಿಂದುಳಿದವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ವಂದಿಸಿದರು.






