LATEST ARTICLES

ದೂರುದಾರನ ಗುರುತು ಬಯಲು ಮಾಡಿದವರ ಬಗ್ಗೆ ಪ್ರತ್ಯೇಕ ತನಿಖೆ; ಅಸ್ಥಿಪಂಜರ ಅವಶೇಷಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿದ್ದೇವೆ ಎಸ್.ಪಿ ಮಾಹಿತಿ

0

ಮಂಗಳೂರು: 'ಧರ್ಮಸ್ಥಳ' ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಧರ್ಮಸ್ಥಳ' ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು. 10ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಶುಕ್ರವಾರ ಸಾಕ್ಷಿ, ದೂರುದಾರ ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ....

ಬೆಳ್ತಂಗಡಿ : ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಕೆರೆಯಲ್ಲಿ ಪತ್ತೆ; ವೀಣಾ ಸಾವಿನ ಸುತ್ತ ಹಲವು ಅನುಮಾನಗಳು ಪೊಲೀಸ್ ತನಿಖೆ ಆರಂಭ

0

ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಶವ ಮನೆಯ ಕೆರೆಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ  ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು  ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್- ಭಾರತಿ ದಂಪತಿಗಳ ಎರಡನೇ ಪುತ್ರಿ ವೀಣಾ(19) ಎಂಬಾಕೆಯ ಶವ ಮನೆಯ ಕೆರೆಯಲ್ಲಿ ಜುಲೈ 11 ರಂದು ಮಾದ್ಯಾಹ್ನದ ಬಳಿಕ ಪತ್ತೆಯಾಗಿದೆ. ನಾಗೇಶ-ಭಾರತಿಗೆ ನಾಲ್ಕು ಜನ ಮಕ್ಕಳಲ್ಲಿ ವೀಣಾ ಎರಡನೇ ಪುತ್ರಿಯಾಗಿದ್ದು ಅವಳಿಗೆ ಮಾನಸಿಕ ಖಾಯಿಲೆ ಇದ್ದು ಆಕೆಗೆ ಪತ್ತೂರಿನ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ವೀಣಾಗೆ ಒಂದುವರೆ ತಿಂಗಳ ಮಗು...

ಧರ್ಮಸ್ಥಳ; ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂದಿತ ಆರೋಪಿ ಶ್ರೀಧರ ವೆಂಕಟ ಕ್ರಷ್ಣ ಉಪಾಧ್ಯಯ ಹೊನ್ನಾವರ ಎಂಬಾತನಾಗಿದ್ದಾನೆ.ಈತನ ವಿರುದ್ದಮಾನ್ಯ ಬೆಳ್ತಂಗಡಿ ನ್ಯಾಯಲಯcc no 205/2016,ಠಾಣಾ ಅ. ಕ್ರ. 510/2015 ಕಲಂ. 379 ಐಪಿಸಿ.ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಜು11 ರಂದುಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ನಾಗೇಶ್ ಕದ್ರಿ, ಉಪ ನೀರಿಕ್ಷಕರು ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ ಮತ್ತು ಚರಣ್ ರಾಜ್...

ದ್ವೇಷ ಭಾಷಣ ಮಾಡುವಂತಿಲ್ಲ ಶಾಸಕ ಹರೀಶ್ ಪೂಂಜ ಅವರಿಗೆ ಹೇಕೋರ್ಟ್ ಆದೇಶ

0

ಬೆಳ್ತಂಗಡಿ: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ, ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಇಂದು ಆದೇಶ ನೀಡಿದೆ. ಕೋಮುಗಲಭೆಗಳಿಗೆ ಪ್ರಚೋದನೆ ನೀಡುವ, ಮುಸ್ಲಿಮ್, ಸಮುದಾಯವನ್ನು ತುಚ್ಚಕರಿಸುವ ಭಾಷಣ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ದೂರುದಾರು ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ...

ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಲಾರಿ ಪಲ್ಟಿ

0

ಬೆಳ್ತಂಗಡಿ;  ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಮರ ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ.ಲಾ ರಿಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.ಘಟನೆಯಿಂದ ಒಂದು ತಾಸು ಹೊತ್ತು ಘಾಟಿಯಲ್ಲಿ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಸ್ಥಳೀಯರ ಸಹಕಾರದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.

ಆರಂಬೋಡಿ; ಅಕ್ರಮ ಮರಳು ಗಣಿಗಾರಿಕೆ; ಪೊಲೀಸ್ ದಾಳಿ 1.70ಲಕ್ಷ ಮೌಲ್ಯದ ಮರಳು ವಶಕ್ಕೆ ; ಪ್ರಕರಣ ದಾಖಲು

0

ಬೆಳ್ತಂಗಡಿ; ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ 1.70ಲಕ್ಷ ಮೌಲ್ಯದ ಭಾರೀ ಪ್ರಮಾಣದ ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ‌ ದಾಖಲಿಸಿದ್ದಾರೆ.ಕಾಂತರಬೆಟ್ಟು ನಿವಾಸಿ ಸುಕೀತ್ ಎಂಬಾತನೇ ಅಕ್ರಮ ಮರಳುಗಣಿಗಾರಿಕೆ ನಡೆಸಿ ಮರಳನ್ನು ಶೇಖರಿಸಿಟ್ಟ ಆರೋಪಿಯಾಗಿದ್ದಾನೆ.ಖಚಿತ ಮಾಹಿತಯ ಮೇರೆಗೆ ವೇಣೂರು ಪೊಲೀಸರು ಇಲ್ಲಿಗೆ ದಾಳಿ ನಡೆಸಿದ್ದು ತೋಟದ ನಡುವೆ ಯಾವುದೇ ಪರವಾನಿಗೆಯಿಲ್ಲದೆ ಶೇಖರಿಸಿಟ್ಟಿದ್ದ 150 ರಿಂದ 170 ಟನ್ ಮರಳನ್ನು ಪತ್ತೆಹಚ್ಚಿದ್ದಾರೆ. ಮಳೆ ಗಾಲಕ್ಕಿಂತ ಮೊದಲು ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಇಲ್ಲಿ ಶೇಖರಿಸಲಾಗಿತ್ತು. ಇದರ ಅಂದಾಜು ಮೌಲ್ಯ ಸುಮಾರು 1,70,000 ಎಂದು...

ವೇಣೂರು; ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

0

ಬೆಳ್ತಂಗಡಿ: ವೇಣೂರು ಠಾಣಾವ್ಯಪ್ತಿಯ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8 ರಂದು ಸಂಜೆ 7 ಗಂಟೆಯ ಸುಮಾರಿಗೆ ಗೋಳಿಯಂಗಡಿಯಲ್ಲಿರುವ ತನ್ನ ಮನೆಯ ಎದುರು ಕೆ.ಎ 21 ಎಸ್ 7390ನಂಬರ್ ನ ಬೈಕ್ ಅನ್ನು ನಿಲ್ಲಿಸಿ ಮೂಡಬಿದ್ರೆಯಲ್ಲಿರುವ ಇನ್ನೊಂದು ಮನೆಗೆ ಹೋಗಿದ್ದರು ಅವರು ಜು9ರಂದು ಬೆಳಗ್ಗೆ ಮನೆಗೆ ಹಿಂತಿರುಗಿದಾಗ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಕಳವಾದ ಬೈಕಿನ ಮೌಲ್ಯ ರೂ...

ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು ಸಚಿವರಿಗೆ ಅಭಿನಂದನೆ

0

ಬೆಳ್ತಂಗಡಿ.ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ ಮಂಜೂರು ಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಇಂದು ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್ ಮಾಲಾಡಿದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ...

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

0

ಬೆಳ್ತಂಗಡಿ;  ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಪೋಷಕರ ಸಭೆಯನ್ನು ಶಾಲಾ ಪ್ರಾಂಶುಪಾಲರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜನಪ್ರಿಯ ವಕೀಲರಾಗಿರುವ ಬಿ.ಕೆ ಧನಂಜಯ ರಾವ್ ರವರು ಮಾತನಾಡಿ ಹೆತ್ತವರಿಗೆ ನಾವು ಮಕ್ಕಳ ಮುಂದೆ ಯಾವ ರೀತಿಯ ನಡೆದುಕೊಳ್ಳಬೇಕು ಹಾಗೂ ಮಕ್ಕಳನ್ನು ಈ ಆಧುನಿಕ ಯುಗದಲ್ಲಿ ಯಾವ ರೀತಿಯ ಬೆಳೆಸಬೇಕು ಹಾಗೂನಮ್ಮ ಮಕ್ಕಳನ್ನು ಪೋಷಕರು ಎಂದು ಇನ್ನೊಬ್ಬರೊಂದಿಗೆ ತುಲನೆ ಮಾಡಬಾರದು ಬದಲಾಗಿ ಹೆತ್ತವರು ತಮ್ಮ ಮಕ್ಕಳನ್ನು ಸಂಪೂರ್ಣವಾಗಿ ಅರ್ಥಯಿಸಿ ಕೊಂಡು ಅವರ ಇಚ್ಛಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೆರೇಪಿಸಬೇಕು ಆ ಸಾಧನೆ...

ಉರುವಾಲು: ಯುವಕ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ : ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ. ದಿ. ನೀಲಯ್ಯ ಗೌಡ ರವರ ಪುತ್ರನಾದ ಸುರೇಶ್ ಅವರು ಉಪ್ಪಿನಂಗಡಿಯ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ದೂರಲಾಗಿದೆ.