ಬಂಟ್ವಾಳ; ಹಾಸನದಿಂದ ಮಂಗಳೂರಿಗೆ ಮಾದಕ ವಸ್ತುಗಳಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬಂಟ್ವಾಳ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಿ ರೂ ಒಂದು ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಾಗಿದೆ.
ಬಂಧಿತ ಆರೋಪಿ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಎಂಬಾತನಾಗಿದ್ದಾನೆ.
ಆ 16 ರಂದು ರಾತ್ರಿ, ಮಂಜುನಾಥ ಟಿ, ಪೊಲೀಸ್ ಉಪನಿರೀಕ್ಷಕರು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆರವರಿಗೆ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ತಡರಾತ್ರಿ KA-01-MA-1284 ನೋಂದಣಿಯ ಕಾರೊಮದನ್ನು ತಡೆದು ಸದ್ರಿ ವಾಹನ ಚಾಲಕನಾಗಿದ್ದ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಎಂಬಾತನನ್ನು ವಿಚಾರಣೆ ನಡೆಸಿದಾಗ ಆತನು ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಕಾರನ್ನು ತಪಾಸಣೆ ನಡೆಸಿದಾಗ ಒಟ್ಟು ಒಟ್ಟು 538.63 ಗ್ರಾಂ MDMA ಮತ್ತು 99.12 ಗ್ರಾಂ ಕೊಕೈನ್ ಹಾಗೂ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿರುತ್ತದೆ. ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಮಾದಕ ವಸ್ತುಗಳ ಅಂದಾಜು ಮೌಲ್ಯವು MDMA ₹53,86,300/- ಹಾಗೂ ಕೊಕೈನ್ ₹49,56,000/- ಆಗಿದ್ದು, ಇತರೆ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸೇರಿದಂತೆ ಒಟ್ಟು ಅಂದಾಜು ಮೌಲ್ಯ ₹1,05,59,450/- ಆಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 113/2026, ಕಲಂ: 8(C) r/w 22(C), 21(ಬಿ) NDPS ACT 1985 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.










