ಬೆಳ್ತಂಗಡಿ; ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಮನೆಯಲ್ಲಿ ಸಾದಿಕ್ ಎಂಬವರ ತಾಯಿ ಅವ್ವಮ್ಮ (82) ಎಂಬವರು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆ14 ರಂದು ಯಾರೋ ಅಪರಿಚಿತ ವ್ಯಕ್ತಿಯೋರ್ವನು ಮುಖಚಹರೆ ಕಾಣದಂತೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಯೊಳಗೆ ಬಂದು ಪಿರ್ಯಾದಿದಾರರ ತಾಯಿಯ ಎರಡು ಕೈಯಲ್ಲಿದ್ದ ಸುಮಾರು 5,00,000/- ಮೌಲ್ಯದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿದ್ದು, ಈ ವೇಲೆ ಸದ್ರಿಯವರ ಕೈಗೆ ರಕ್ತಗಾಯವಾಗಿರುವ ಬಗ್ಗೆ ಸಾದಿಕ್ ಎಂಬವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ: 70/2026, ಕಲಂ: 309(6) BNS- 2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆ16 ರಂದು ಈ ಪ್ರಕರಣದ ಆಪಾದಿತನಾದ ಹಾಗೂ ಸದ್ರಿ ಅವ್ವಮ್ಮ (82)ರವರ ಮೊಮ್ಮಗನಾದ ಬಂಟ್ವಾಳ ತೆಂಕಕಜೆಕಾರು ನಿವಾಸಿ ಶಬೀರ್ (33) ಎಂಬಾತನನ್ನು ಬಂಧಿಸಿ ಆತನಿಂದ ಎರಡು ಚಿನ್ನದ ಬಳೆಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಆಪಾದಿತನನ್ನು ವಿಚಾರಣೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು
ಈ ಪ್ರಕರಣವನ್ನು ಪತ್ತೆಕಾರ್ಯದಲ್ಲಿ ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕರಾದ ಶ್ರೀಮತಿ ರೋಹಿಸಣಿ ಸಿ.ಕೆ ರವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಪುಂಜಾಲಕಟ್ಟೆ ಠಾಣಾ ಪಿ.ಎಸ್.ಐ ರಾಜೇಶ್ ಕೆ.ವಿ, ಸಿಬ್ಬಂದಿಗಳಾದ ಎ ಎಸ್ ಐ ಬೆನ್ನಿಚ್ಚನ್, ಪ್ರವೀಣ್ ಮೂರುಗೋಳಿ, ರಾಜೇಶ್, ವಿಜಯ್ ಕುಮಾರ್, ರಾಹುಲ್ ರಾವ್, ನಾಗರಾಜ್, ರಜಿತ್, ಬಸವರಾಜ್, ಸತೀಶ್ ರವರು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ರವರು ಕರ್ತವ್ಯ ನಿರ್ವಹಿಸಿರುತ್ತಾರೆ.




