ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಭೂಷಣ್ ಬಾರ್ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ರಂದು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಈತ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಬಸ್ ನಿಲ್ದಾಣದ ಸಮೀಪ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕದ ಮೂಡಿಸಿತ್ತು.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.




