Home ಅಪರಾಧ ಲೋಕ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಬಂಧನ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಬಂಧನ

5
0

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಕೇರಳ‌ಮೂಲದ ನಿತಿನ್ ಕೃಷ್ಣನ್ (27) ಎಂಬಾತನನ್ನು ಬಂಧಿಸಲಾಗಿದೆ.
ಕದ್ರಿ ಗ್ರಾಮದ ಪದವು ಮೈದಾನದ ಬಳಿಯ ಆಯುರ್ವೇದ ಕ್ಲಿನಿಕ್‌ನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆತನಿಂದ ₹60 ಸಾವಿರ ಮೌಲ್ಯದ ಗಾಂಜಾ, KTM ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಗಾಂಜಾ ಸೇವನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆಶ್ವಿನ್ ಕ್ಸೇವಿಯರ್ (24)ನ ವಿಚಾರಣೆ ವೇಳೆ ದೊರೆತ ಮಾಹಿತಿಯ ಆಧಾರದ ಮೇಲೆ ನಿತಿನ್ ಕೃಷ್ಣನ್‌ನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ನಿತಿನ್ ಕೃಷ್ಣನ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

LEAVE A REPLY

Please enter your comment!
Please enter your name here