Home ಅಪರಾಧ ಲೋಕ ಮಂಗಳೂರಿನಲ್ಲಿ MDMA ಮಾರಾಟ: ಕೇರಳ ಮೂಲದ ವ್ಯಕ್ತಿ ಬಂಧನ₹1.36 ಲಕ್ಷದ MDMA ವಶ

ಮಂಗಳೂರಿನಲ್ಲಿ MDMA ಮಾರಾಟ: ಕೇರಳ ಮೂಲದ ವ್ಯಕ್ತಿ ಬಂಧನ₹1.36 ಲಕ್ಷದ MDMA ವಶ

42
0

ಮಂಗಳೂರು: ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೇರಳ ಕಾಸರಗೋಡು ಜಿಲ್ಲೆಯ ವರ್ಕಾಡಿ ನಿವಾಸಿ ಮೊಹಮ್ಮದ್ ಇರ್ಷಾದ್ (30) ಎಂಬಾತನಾಗಿದ್ದಾನೆ.

ಆ.18ರಂದು ಪಂಪ್ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋ ರಿಕ್ಷಾದಲ್ಲಿ MDMA ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಮಾಹಿತಿ ಆಧರಿಸಿ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನಿಂದ ₹1.36 ಲಕ್ಷ ಮೌಲ್ಯದ 13.69 ಗ್ರಾಂ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹2,94,500 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನನ್ನು ಮೊಹಮ್ಮದ್ ಇರ್ಷಾದ್ (30) ಎಂದು ಗುರುತಿಸಲಾಗಿದೆ. ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c), 22(c) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here