Home ಅಪರಾಧ ಲೋಕ ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ

ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ

1
0


ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಅವರಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. 12/2020ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 354(A1), 506 ಹಾಗೂ ಪೋಕ್ಸೋ ಕಾಯ್ದೆ–2012ರ ಕಲಂ 8ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಆರೋಪಗಳು ಸಾಬೀತಾಗಿರುವುದಾಗಿ ತೀರ್ಪು ನೀಡಿ, ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು ₹35 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.
ಪ್ರಕರಣದ ಅಂದಿನ ತನಿಖಾಧಿಕಾರಿ ಹಾಗೂ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಅಭಿಯೋಜಕರಾದ ಪುಷ್ಪರಾಜ್ ಅವರು ಪ್ರಕರಣದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here