ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಯುವ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ತೆರಳಿ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ ಹಣ್ಣುಹಂಪಲು ವಿತರಿಸಿದರು. ಹುಟ್ಟುಹಬ್ಬದ ಆಚರಣೆಯನ್ನು ಸಮಾಜಮುಖಿ ಹಾಗೂ ಮಾನವೀಯ ಸೇವೆಯೊಂದಿಗೆ ಆಚರಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸಂದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಸಮಿತಿ ಅಧ್ಯಕ್ಷ ಅಜರ್ ನಾವೂರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ನವೀನ್ ಗೌಡ, ಅರುಣ್ ಫರ್ನಾಂಡಿಸ್, ಪಕ್ಷದ ಪ್ರಮುಖರಾದ ಜೋಶಿಲ್ ಲಾಯಿಲಾ, ಸುಧೀರ್ ದೇವಾಡಿಗ ಹಾಗೂ ಸ್ಟೀವನ್ ಮೋನಿಸ್ ಉಪಸ್ಥಿತರಿದ್ದರು.
ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಈ ಸೇವಾ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.



