Home ಶಾಲಾ ಕಾಲೇಜು ಬೆಳ್ತಂಗಡಿ: ತಾಲೂಕಿನ‌ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ‌ ಪ್ರಶಸ್ತಿ

ಬೆಳ್ತಂಗಡಿ: ತಾಲೂಕಿನ‌ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ‌ ಪ್ರಶಸ್ತಿ

1
0

ಬೆಳ್ತಂಗಡಿ: ಸೆಪ್ಟೆಂಬರ್ 5 ರಂದು ನಡೆಯುವ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ಕೊಡ ಮಾಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮೂರು ಮಂದಿ ಶಿಕ್ಷಕರು ಆಯ್ಕೆಯಾಗಿದ್ದಾರೆ.

ಇಳಂತಿಲ ಗ್ರಾಮದ ಅಂಡೆತಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಮುಂಡ್ರುಪ್ಪಾಡಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಚಿತ್ರ ಪ್ರಭಾ, ವೇಣೂರು ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ರವೀಂದ್ರ ಕೆ. ಅವರಿಗೆ 2026_27 ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಬಾರಿ ಮಂಗಳೂರಿನಲ್ಲಿ ಸೆ.5ರಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ನಡೆಯಲಿದೆ, ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.5ರಂದು ಸಂತೆಕಟ್ಟೆ ಬಳಿಯಿರುವ ಎಸ್ ಡಿಎಂ ಕಲಾಭವನದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here