Home ರಾಜಕೀಯ ಸಮಾಚಾರ ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಭೇಟಿ

ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಭೇಟಿ

0
15

ಬೆಳ್ತಂಗಡಿ;  ಪೌರ ಕಾರ್ಮಿಕರು ಸೇರಿದಂತೆ ಪಂಚಾಯತ್ ವ್ಯಾಪ್ತಿಯ ಸ್ವಚ್ಚತಾ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಹಂತದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಕಾಂಗ್ರೆಸ್ ಪಕ್ಷದ ಸರ್ಕಾರ ಅತ್ಯಂತ ದುರ್ಬಲ ವರ್ಗದವರ ಪರವಾಗಿ ಕೆಲಸ ಮಾಡುತ್ತದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ರವರು ಹೇಳಿದರು.

ಅವರು ಸೋಮವಾರ ಧರ್ಮಸ್ಥಳದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪೌರ ಕಾರ್ಮಿಕರು ಹಾಗೂ ಸ್ವಚ್ಚತಾ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸರ್ಕಾರದ ಕೆಲವೊಂದು ನಿಯಮಾವಳಿಗಳನ್ನು ಬದಲಾವಣೆ ಮಾಡುವ ಸಂಬಂಧ ಮುಖ್ಯಮಂತ್ರಿ , ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ಜೊತೆಗೆ ಭೇಟಿಯಾಗಿ ಸ್ವಚ್ಚತಾ ಕಾರ್ಮಿಕರ ಬದುಕಿಗೆ ಹೊಸ ಚೈತನ್ಯ ನೀಡುವ ಕೆಲಸವನ್ನು ಮಾಡುತ್ತೇನೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡುತ್ತಾ ನಮ್ಮ ಸರ್ಕಾರ ಧ್ವನಿ ಇಲ್ಲದವರ ಧ್ವನಿಯಾಗಿದ್ದು , ಸ್ವಚ್ಚತಾ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ. ತಾಲೂಕಿಗೆ ಪ್ರಥಮ ಬಾರಿಗೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ , ನಮ್ಮ ತಾಲೂಕಿನ ಸ್ವಚ್ಚತಾ ಕಾರ್ಮಿಕರ ಸಮಸ್ಯೆಗಳ ಪರಿಹಾರದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ನಾನು ಸದಾಕಾಲವೂ ನಿಮ್ಮೊಂದಿಗೆ ಇದ್ದು , ನಿಮ್ಮ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಬಗೆಹರಿಸಲು ಸೇತುವೆಯಾಗಿ ಕೆಲಸ ಮಾಡುತ್ತೇನೆ ಎಂದು ಬರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಪರವಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ ರಘು ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ) ಅಧ್ಯಕ್ಷ ನಾಗೇಶ್ ಕುಮಾರ್ ಗೌಡ , ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು , ಕಾರ್ಯದರ್ಶಿ ಚಂದ್ರಭೋವಿ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ , ಮಾಜಿ ತಾ‌.ಪಂ ಸದಸ್ಯರಾದ ಈಶ್ವರ ಭಟ್ ಮಾಯಿಲತ್ತೋಡಿ , ಪ್ರಶಾಂತ್ ವೇಗಸ್ ಮೊದಲಾದವರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here