Home ಸ್ಥಳೀಯ ಸಮಾಚಾರ ಬೆಳ್ತಂಗಡಿ: ಮಕ್ಕಳಿಲ್ಲದ ಕೊರಗು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಮಕ್ಕಳಿಲ್ಲದ ಕೊರಗು ವ್ಯಕ್ತಿ ಆತ್ಮಹತ್ಯೆ

0
10

ಬೆಳ್ತಂಗಡಿ : ಮಕ್ಕಳಿಲ್ಲದ
ಕೊರಗು ಮತ್ತು ಪತ್ನಿಯ ಅನಾರೋಗ್ಯದ ಚಿಂತೆಯಲ್ಲಿ ನೊಂದು ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಒಬ್ಬರೇ ಇರುವ ವೇಳೆ
ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರು ಗ್ರಾಮದ ಪಿಜಕ್ಕಳ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಪಿಜಕ್ಕಳ  ಸುಧಾಕರ ಗೌಡ (56) ಎಂಬವರೇ ಮಲ್ಲಿಗೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಸೇವಿಸಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ನಾಲ್ಕು ತಿಂಗಳ ಹಿಂದೆ ಇವರ ಪತ್ನಿ ಅನಾರೋಗ್ಯಕ್ಕೊಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ತವರು ಮನೆಯಲ್ಲಿ ಮತ್ತು ತಂಗಿ ಮನೆಯಲ್ಲಿದ್ದರು.
ಮೊದಲೇ ಮಕ್ಕಳಿಲ್ಲದ ಚಿಂತೆಯಲ್ಲಿದ್ದು
ನಾಲ್ಕು ತಿಂಗಳಿನಿಂದ
ಮನೆಯಲ್ಲಿ ಪತ್ನಿ ಇಲ್ಲದೆ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಕೊರಗಿನಿಂದ ನೊಂದಿದ್ದರು ಎನ್ನಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here