Home ಅಪರಾಧ ಲೋಕ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ

6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ

1
0

ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸಹಕಾರದಿಂದ ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆ
ಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಎಂಬ ವಾರೆಂಟ್ ಆರೋಪಿಯನ್ನು ಸೆ.15ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಆರೋಪಿಗೆ ಸೆ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

LEAVE A REPLY

Please enter your comment!
Please enter your name here