Home ರಾಜಕೀಯ ಸಮಾಚಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ ಶೇಖರ ಕುಕ್ಕೇಡಿ

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ ಶೇಖರ ಕುಕ್ಕೇಡಿ

1
0

ಬಳ್ತಂಗಡಿ; ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ದ.ಕ ಜಿಲ್ಲೆಯ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸ್ಥಾನಕ್ಕೆ ಜಿ.ಪಂ. ಮಾಜಿ ಸದಸ್ಯ ಸದಸ್ಯ ಶೇಖರ ಕುಕ್ಕೇಡಿ ರಾಜೀನಾಮೆ ನೀಡಿದ್ದಾರೆ.
ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್‌ ಆ‌ರ್. ಪೂಜಾರಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಎರಡುವರೆ ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ಕಳೆದ 3 ದಶಕಗಳಿಂದ ಡಿಸಿ ಮನ್ನಾ ಜಮೀನು ಅರ್ಹ ಫಲಾನುಭವಿಗಳಿಗೆ ಹಂಚಿಕೆಗಾಗಿ ಹೋರಾಟ ಸಂಘಟಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಕರಾವಳಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಡಿಸಿ ಮನ್ನಾ ಜಮೀನನ್ನು ಅರ್ಹ ದಲಿತ, ಆದಿವಾಸಿ ಸಮುದಾಯಗಳ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಬಗ್ಗೆ ವಾಗ್ದಾನ ನೀಡಲಾಗಿದೆ. ಪಕ್ಷ ಅಧಿಕಾರಕ್ಕೆ ಬಂದು ಮೂರುವರೆ ವರ್ಷ ಕಳೆದರೂ ನಮ್ಮ ಪಕ್ಷ ಅದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಅತ್ಯಂತ ನೋವಿನ ಸಂಗತಿ. ಮಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲ ನಿವಾಸಿಗಳ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲ್ಲದೆ ಆದಿದ್ರಾವಿಡ ಸಮುದಾಯದ ಮೂಲಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿಯ ಮೀಸಲಿಡದೇ ವಂಚಿಸಲಾಗಿದೆ ನಾನು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಸಾಮಾಜಿಕ ನ್ಯಾಯದ ಆಶಯಗಳ ಮೇಲೆ ನಂಬಿಕೆ ಇಟ್ಟುಕೊಂಡು ಪಕ್ಷದಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದೇನೆ. ಆದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಹಿತಾಸಕ್ತಿಗಳಿಗೆ ಸೂಕ್ತ ಪ್ರಾಮುಖ್ಯತೆ ದೊರೆಯದಿರುವುದರಿಂದ, ಪಕ್ಷದಲ್ಲಿ ಮುಂದುವರಿಯುವುದು ಆತ್ಮಸಾಕ್ಷಿಗೆ ವಿರುದ್ಧವಾದ ನಿರ್ಧಾರವಾಗುತ್ತದೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here