Home ಬ್ರೇಕಿಂಗ್‌ ನ್ಯೂಸ್ ಸೌಜನ್ಯ ಮಾವ ವಿಠಲ ಗೌಡರಿಗೆ ನ್ಯಾಯಾಲಯ ವಿಧಿಸಿದ್ದ  ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ಸೌಜನ್ಯ ಮಾವ ವಿಠಲ ಗೌಡರಿಗೆ ನ್ಯಾಯಾಲಯ ವಿಧಿಸಿದ್ದ  ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

1
0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ  ಕು.ಸೌಜನ್ಯಳ ಮಾವ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ನೀಡಿದ್ದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿದ್ದರೂ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಕ್ಕಾಗಿ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ 17-01-2026 ರಂದು ಒಂದು ತಿಂಗಳ ಸಜೆ ವಿಧಿಸಿ ಆದೇಶ ನೀಡಿತ್ತು.

ಈ ಮಧ್ಯೆ ಬೆಂಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ವಿಠಲ ಗೌಡ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ವಿಠಲ ಗೌಡ ಅವರ ಅರ್ಜಿಯನ್ನು ಪುರಸ್ಕರಿಸಿದ್ದು ಬೆಂಗಳೂರು ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಆದೇಶಕ್ಕೆ ಸೆ.22 ರಂದು ಮಧ್ಯಂತರ ತಡೆ ನೀಡಿದೆ.

LEAVE A REPLY

Please enter your comment!
Please enter your name here