ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್, ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಧನಂಜಯ್ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್, ನಿಡ್ಲೆ ಪ್ಯಾಕ್ಸ್ ಮಾಜಿ ಅಧ್ಯಕ್ಷ ರಮೇಶ್ ರಾವ್, ಕಳೆಂಜ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ್ ಗೌಡ, ಕಳೆಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಂಬರೀಷ್, ಕಾರ್ಯತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿಜಯ್ ಕುಮಾರ್, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ.ಪಂ ಮಾಜಿ ಸದಸ್ಯ ಶರತ್, ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಪ್ರಕಾಶ್ ನಾರಾಯಣ್ ಚಾರ್ಮಾಡಿ, ತಾ.ಪಂ ಮಾಜಿ ಸದಸ್ಯ ಕೊರಗಪ್ಪ ಗೌಡ, ಪ್ರಮುಖರಾದ ಸೀತಾರಾಮ ಬೆಳಾಲು,ಯಶವಂತ್, ರಾಜೇಶ್ ಮಲೆಕುಡಿಯ, ಪಂಚಾಯತ್ ಕಾರ್ಯದರ್ಶಿ ಹೊನ್ನಪ್ಪ ಗೌಡ, ಪಾಂಡುರಂಗ ಭಟ್, ಬಾಲಕೃಷ್ಣ ಮುಗೇರಡ್ಕ, ಚಂದ್ರಕಾಂತ್ ನಿಡ್ಡಾಜೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.




