ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ ವಿದ್ಯುತ್ ಕಂಬಗಳ ಸ್ಥಳಾಂತರ ಹಾಗೂ ಬೆಳ್ತಂಗಡಿ 33 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ. 8ರಂದು ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಲ್ಯಾಲ ಫೀಡರ್ ಹಾಗೂ ಬೆಳ್ತಂಗಡಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಬಂಗಾಡಿ, ಕೊಲ್ಲಿ, ಕೊಯ್ಯೂರು, ಉಜಿರೆ ಮತ್ತು ಬೆಳಾಲು ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಇರಲಿದೆ.
ಅದೇ ರೀತಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಧರ್ಮಸ್ಥಳ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ ಹಾಗೂ ಅರಸಿನಮಕ್ಕಿ ಫೀಡರ್‌ಗಳ ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



