Home ರಾಷ್ಟ್ರ/ರಾಜ್ಯ ಜಿ.ಪಂ. ತಾ.ಪಂ ಚುನಾವಣೆಗೆ ವೇದಿಕೆ ಸಿದ್ದ ವರ್ಗವಾರು ಮೀಸಲಾತಿ ಪ್ರಕಟ

ಜಿ.ಪಂ. ತಾ.ಪಂ ಚುನಾವಣೆಗೆ ವೇದಿಕೆ ಸಿದ್ದ ವರ್ಗವಾರು ಮೀಸಲಾತಿ ಪ್ರಕಟ

0
2

ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ವೇದಿಕೆ ಸಿದ್ದವಾಗಿದ್ದು ವರ್ಗವಾರು ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆಯನ್ನು ರಾಜ್ಯ ಸರಕಾರ ಪ್ರಕಟಿಸಿದೆ.
ರಾಜ್ಯದ ಒಟ್ಟು 31 ಜಿಲ್ಲೆಗಳ 1129 ಜಿಲ್ಲಾ ಪಂಚಾಯತ್ ಸ್ಥಾನಗಳು ಮತ್ತು 3656 ತಾಲೂಕು ಪಂಚಾಯತ್ ಸ್ಥಾನಗಳಿಗೆ ವರ್ಗವಾರು ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಸಾಮಾನ್ಯ ಮತ್ತು ಮಹಿಳಾ ವರ್ಗಗಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ.

1129 ಜಿಲ್ಲಾ ಪಂಚಾಯತ್ ಸ್ಥಾನಗಳ ಪೈಕಿ ಪರಿಶಿಷ್ಟ ಜಾತಿ ವರ್ಗಕ್ಕೆ 225, ಪರಿಶಿಷ್ಟ ಪಂಗಡ ವರ್ಗಕ್ಕೆ 102, ಹಿಂದುಳಿದ ವರ್ಗ ಎ ಗೆ 183, ಹಿಂದುಳಿದ ವರ್ಗ ಬಿ ಗೆ 43 ಮತ್ತು ಸಾಮಾನ್ಯ ವರ್ಗಕ್ಕೆ 576 ಸ್ಥಾನಗಳನ್ನು ಮೀಸಲಿರಿಸಲಾಗಿದೆ.

3656 ತಾಲೂಕು ಪಂಚಾಯತ್ ಸ್ಥಾನಗಳ ಪೈಕಿ ಪರಿಶಿಷ್ಟ ಜಾತಿಗೆ 733, ಪರಿಶಿಷ್ಟ ಪಂಗಡಕ್ಕೆ 394, ಹಿಂದುಳಿದ ವರ್ಗ ಎ ಗೆ 508, ಹಿಂದುಳಿದ ವರ್ಗ ಬಿ ಗೆ 111 ಮತ್ತು ಸಾಮಾನ್ಯ ವರ್ಗಕ್ಕೆ 1910 ಸ್ಥಾನಗಳನ್ನು ಮೀಸಲಿರಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here