ಬೆಳ್ತಂಗಡಿ: ರಾಜ್ಯ ಸರಕಾರ ನೂತನವಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರಚಿಸಿದ್ದು ಅನುಷ್ಠನ ಸಮಿತಿಯ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಪದ್ಮನಾಭ ಸಾಲಿಯಾನ್ ಅವರು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಸಾದಸ್ಯರನ್ನು ನೇಮಕ ಮಾಡಲಾಗಿದ್ದು ಸಮಿತಿಯಲ್ಲಿ ಅಧ್ಯಕ್ಷರು 15 ಮಂದಿ ಸದಸ್ಯರು ಇದ್ದಾರೆ.









