Home ರಾಜಕೀಯ ಸಮಾಚಾರ ಬೆಳ್ತಂಗಡಿ: ನವೆಂಬರ್ 2 ರಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಕ್ಷಿತ್ ಶಿವರಾಂ...

ಬೆಳ್ತಂಗಡಿ: ನವೆಂಬರ್ 2 ರಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಕ್ಷಿತ್ ಶಿವರಾಂ ಹಾಗೂ ಸದಸ್ಯರ ಪದಗ್ರಹಣ

2
0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ರಕ್ಷಿತ್ ಶಿವರಾಂ ಹಾಗೂ ಸಮಿತಿಯ ನೂತನ ಸದಸ್ಯರ ಪದಗ್ರಹಣ ಕಾರ್ಯಕ್ರಮವು ಮುಂಬರುವ ನವೆಂಬರ್ 2 ರಂದು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.
ಕಾರ್ಯಕ್ರಮದ ವಿವರಗಳ ಪ್ರಕಾರ, ದಿನಾಂಕ: 02-11-2026, ಸೋಮವಾರದಂದು ಅಪರಾಹ್ನ 2:30 ಗಂಟೆಗೆ ಬೆಳ್ತಂಗಡಿಯ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಈ ಮಹತ್ವದ ಪದಗ್ರಹಣ ಸಮಾರಂಭವು ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಮುಖ್ಯ ಅತೀಥಿಗಳಾಗಿ ಭಾಗವಹಿಸಲಿದ್ದು, ಜೊತೆಗೆ ಜಿಲ್ಲೆಯ ಗೌರವಾನ್ವಿತ ವಿಧಾನ ಪರಿಷತ್ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಲಿದ್ದಾರೆ.
ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲೂಕಿನ ಕಟ್ಟಕಡೆಯ ಅರ್ಹ ಫಲಾನುಭವಿಗಳಿಗೂ ಯಶಸ್ವಿಯಾಗಿ ತಲುಪಿಸುವ ಜವಾಬ್ದಾರಿಯನ್ನು ಹೊತ್ತಿರುವ ನೂತನ ಸಮಿತಿಯ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here