


ಮಂಗಳೂರು: ಧರ್ಮಸ್ಥಳ ಗ್ರಾಮದ ಕುಸುಮಾವತಿ ಮತ್ತು ಸೌಜನ್ಯ ಅವರ ಸಂಬಂಧದ ಕುರಿತು ಎಂದು ಅನುಮಾನವಿದೆ ಎಂದು ಧರ್ಮಸ್ಥಳ ಗ್ರಾಮದ ಕಿಶೋರ್ ಎಂಬವರು ಎಸ್‌ಐಟಿಗೆ ಮನವಿ ಮಾಡಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಸೌಜನ್ಯ ತಾಯಿ ಕುಸುಮಾವತಿ ಎಂಬ ವಿಚಾರದಲ್ಲಿ ನಮಗೆ ಯಾವುದೇ ಅನುಮಾನಗಳಿಲ್ಲ.ಈ ಬಗ್ಗೆ ನಾವು ನಮ್ಮ ತನಿಖೆಯ ವ್ಯಾಪ್ತಿಯನ್ನು ಮೀರಿ ಹೋಗುವುದಿಲ್ಲ.ಪ್ರಕರಣಕ್ಕೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ತನಿಖೆ ನಡೆಸುವುದಿಲ್ಲ ಎಂದು ಮಾಧ್ಯಮಗಳಿಗೆ ಅವರು ಸಂದೇಶದ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಅಂತಹ ಯಾವುದೇ ಕೇಸ್ ಗಳಿದ್ದರೆ ಸ್ಥಳೀಯ ಪೊಲೀಸರಿಗೆ ದೂರು ನೀಡಬಹುದು ಅವರು ಅದರ ಬಗ್ಗೆ ಗಮನಿಸಬಹುದು ಎಂದು ಸುಧೀರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.




