Home ಅಪರಾಧ ಲೋಕ ಬೆಳ್ತಂಗಡಿ : ಮೇಲಂತ ಬೆಟ್ಟುವಿನಲ್ಲಿ ಕಾಡು ಪ್ರಾಣಿ ಬೇಟೆ ಅರಣ್ಯ ಇಲಾಖೆಯಿಂದ ಪ್ರಕರಣ ದಾಖಲು

ಬೆಳ್ತಂಗಡಿ : ಮೇಲಂತ ಬೆಟ್ಟುವಿನಲ್ಲಿ ಕಾಡು ಪ್ರಾಣಿ ಬೇಟೆ ಅರಣ್ಯ ಇಲಾಖೆಯಿಂದ ಪ್ರಕರಣ ದಾಖಲು

0
2

ಬೆಳ್ತಂಗಡಿ : ಪಟ್ಟಾ ಜಾಗದಲ್ಲಿ ಅಪರಿಚಿತ ವ್ಯಕ್ತಿಗಳು ಬಂದೂಕು ಬಳಸಿ ಕಾಡುಪ್ರಾಣಿ ಬೇಟೆಯಾಡಿರುವ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕುರ್ತೋಡಿ ಗುತ್ತು ಎಂಬಲ್ಲಿರುವ ಸ.ನಂ 112 ರ ರಾಧಾ ಎಂಬವರಿಗೆ ಸೇರಿದ ತೋಟದಲ್ಲಿ ಅಪರಿಚಿತ ವ್ಯಕ್ತಿಗಳು ಬಂದೂಕು ಬಳಸಿ ಕಾಡುಪ್ರಾಣಿಯನ್ನು ಬೇಟೆಯಾಡಿ ತೆಗೆದುಕೊಂಡ ಹೋಗಿರುವ ಬಗ್ಗೆ ಕುರಹುಗಳು ಮತ್ತು ರಕ್ತದ ಕಲೆಗಳು ಪತ್ತೆಯಾಗಿದೆ.

ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ಮಹೇಶ್ ದೇವಾಡಿಗ ಮತ್ತು ಸಿಬ್ಬಂದಿ ನ.10 ರಂದು ಘಟನಾ ಸ್ಥಳಕ್ಕೆ ಹೋಗಿ ರಕ್ತದ ಕಲೆಗಳ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಲಯಕ್ಕೆ ಕಳುಹಿಸಿದ್ದು. ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ನ.11 ರಂದು ಅಪರಿಚಿತ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 9 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಕೂಡ ಇದೆ ಪರಿಸರದಲ್ಲಿ ಕಾಡುಪ್ರಾಣಿ ಬೇಟೆಯಾಡಿರುವ ರಕ್ತದ ಕುರುಹುಗಳು ಅರಣ್ಯ ಇಲಾಖೆಗೆ ಪತ್ತೆಯಾಗಿತ್ತು. ಇದೀಗ ಘಟನೆ ಮರುಕಳಿಸಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here