ಬೆಳ್ತಂಗಡಿ : ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿ
ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಭಾರತ ದೇಶದ ಪ್ರಸಕ್ತ ಸನ್ನಿವೇಶ ಹಾಗೂ ಇದಕ್ಕಿರುವ ಪರಿಹಾರವನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು.
ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಸಮಾರೋಪ ಭಾಷಣವನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜ ತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸುಹೈಲ್ ಖಾನ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಇನಾಸ್ ರೋಡ್ರಿಗಸ್, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿ ಅಶ್ರಫ್ ಕಟ್ಟೆಹಾಗೂ ಕ್ಷೇತ್ರ ವ್ಯಾಪ್ತಿಯ ಎಲ್ಲಾ ನಾಯಕರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.