Home ರಾಜಕೀಯ ಸಮಾಚಾರ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಣಿಯೂರು ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ...

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಣಿಯೂರು ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ

2
0

ಪದ್ಮುಂಜ : (ನ. 23) ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ಬೃಹತ್ ಪ್ರತಿಭಟನೆ ನವೆಂಬರ್ 23 ರಂದು ಪದ್ಮುಂಜ ಮುಖ್ಯ ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. ಪ್ರಾಸ್ತಾವಿಕ ಮಾತುಗಳನ್ನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ನೀತಿಗಳ ವಿರುದ್ಧ ಕಿಡಿಕಾರಿದರು. ಪ್ರತಿಭಟನೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಜೋಯಲ್ ಮಂಡೋನ್ಸ ಮಡoತ್ಯಾರು, ಹಾಗೂ ಜಿಲ್ಲಾ ಮನ್ ಕೀ ಬಾತ್ ಸಂಚಾಲಕರಾದ ಸೀತಾರಾಮ್ ಬೆಳಾಲು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ ಪೆರ್ಲ -ಬೈಪಾಡಿ,ನೆರೆದ ಗ್ರಾಮಸ್ಥರನ್ನು ಉದ್ದೇಶಿಸಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ನೀತಿಗಳ ವಿರುದ್ಧ ಎಳೆ ಎಳೆಯಾಗಿ ವಿವರಿಸಿದರು. ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್,ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುನಿಲ್ ಅನವು, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ,ಉರುವಾಲು ಶಕ್ತಿ ಕೇಂದ್ರ ಪ್ರಮುಖರಾದ ಕೃಷ್ಣಪ್ರಸಾದ್ ಮಜಿಕುಡೇಲ್ ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿಯ ಹಲವು ಪ್ರಮುಖರು, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು. ಕಣಿಯೂರು ಶಕ್ತಿ ಕೇಂದ್ರ ಪ್ರಮುಖರು ಯುವ ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಕಣಿಯೂರು ಪಂಚಾಯತ್ ಬಳಿ ತೆರಳಿ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಲಾಯಿತು.

LEAVE A REPLY

Please enter your comment!
Please enter your name here