Home ಅಪರಾಧ ಲೋಕ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಬಾಲಕ ಸೇರಿದಂತೆ ಮೂವರ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಬಾಲಕ ಸೇರಿದಂತೆ ಮೂವರ ಬಂಧನ

596
0

ಬೆಳ್ತಂಗಡಿ; ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿ ಆಕೆ ಅರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದದ್ದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕೋ ಅಡಿಯಲ್ಲಿ ಮೂವರ ವಿರುದ್ಧ ಮೇ 31 ರಂದು ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಇದೀಗ ಬೆಳ್ತಂಗಡಿ ಪೊಲೀಸರು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಸಾಲ್(26) ಫಾರೂಕ್(19) ಹಾಗೂ ಅಪ್ರಾಪ್ತ ಬಾಲಕನನ್ನು ಜೂ.1 ರಂದು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮತ್ತೊಬ್ಬ ಅಪ್ರಾಪ್ತನನ್ನು ಮಂಗಳೂರು ಬಾಲ ನ್ಯಾಯಾಲಕ್ಕೆ ಹಾಜರುಪಡಿಸಿದ್ದು ಮಂಗಳೂರು ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಸೇರಿ ಒತ್ತಾಯಪೂರ್ವಕವಾಗಿ ಅತ್ಯಾಚಾರವೆಸಗಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ.ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೊಂದ ಬಾಲಕಿ ಮೇ.31 ರಂದು ನೀಡಿದ ದೂರಿನ ಮೇರೆಗೆ ಓರ್ವ ಅಪ್ರಾಪ್ತ ಬಾಲಕ ಸೇರಿ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸ್‌ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

LEAVE A REPLY

Please enter your comment!
Please enter your name here