Home ಬ್ರೇಕಿಂಗ್‌ ನ್ಯೂಸ್ ನ್ಯಾಯಾಲಯದಲ್ಲಿ ಹರೀಶ್ ಪೂಂಜರಿಗೆ ಹಿನ್ನಡೆ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ನ್ಯಾಯಾಲಯದಲ್ಲಿ ಹರೀಶ್ ಪೂಂಜರಿಗೆ ಹಿನ್ನಡೆ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

473
0

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ
ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ತಿಳಿದು ಬಂದಿದೆ ನ್ಯಾಯಾಲಯದ ತೀರ್ಪಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಬರಬೇಕಾಗಿದೆ

LEAVE A REPLY

Please enter your comment!
Please enter your name here