ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿ ಎಂಬಲ್ಲಿನ ಮನೆಯೊಂದಕ್ಕೆ ಮಂಗಳವಾರ ಮುಂಜಾವ ನುಗ್ಗಿ ಸುಲಿಗೆಗೈದ ಚಡ್ಡಿಗ್ಯಾಂಗ್‌ನ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದ ರಾಜು ಸಿಂದ್ವಾನಿಯ (24), ಮಯೂರ್ (30), ಬಾಲಿ (22), ವಿಕಿ (21) ಆರೋಪಿಗಳಾಗಿದ್ದಾರೆ. ಇವರಿಂದ ಸುಲಿಗೆ ಮಾಡಿದ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್‌ಗಳು ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.