ಬೆಳ್ತಂಗಡಿ; ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ(35) ಎಂಬಾತ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ.
ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಈಡಾದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತಪಟ್ಟಿದ್ದರು.
ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ