ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.
ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು.. ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ,ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.