Home ಅಪರಾಧ ಲೋಕ ಧರ್ಮಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಧರ್ಮಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

267
0

ಬೆಳ್ತಂಗಡಿ; ಧರ್ಮಸ್ಥಳ ಗೇಟ್ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಆ 29 ರಂದು ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಧರ್ಮಸ್ಥಳ ಗೇಟಿನ ಸಮೀಪ ಅಪರಿಚಿತ ವ್ಯಕ್ತಿ ಬಿದ್ದಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಮೃತ ವ್ಯಕ್ತಿಗೆ ಸುಮಾರು 40ರಿಂದ 45ವರ್ಷ ಪ್ರಾಯ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತರ ಬಗ್ಗೆ ಯಾವುದೆ ಗುರುತುಗಳು ಪತ್ತೆಯಾಗಿಲ್ಲ. ವಾರಿಸುದಾರು ಇದ್ದಲ್ಲಿ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ‌.

LEAVE A REPLY

Please enter your comment!
Please enter your name here