ಬೆಳ್ತಂಗಡಿ; ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರುಸಾವಿರಕ್ಕೂ ಹೆಚ್ಚು ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ. ಮದ್ಯದ ಬಾಟ್ಲಿಗಳನ್ನೂ ಕಳ್ಳತನ ಮಾಡಲಾಗಿದ್ದು ಇದರಬಗ್ಗೆ ಹೆಚ್ಚಿನ ಮಾಹುತಿಗಳು ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ