Home ಅಪರಾಧ ಲೋಕ ಕುವೆಟ್ಟು; ಮನೆಗೆ ನುಗ್ಗಿ ಚಿನ್ನಾಭರಣ ನಗದು ಕಳವು

ಕುವೆಟ್ಟು; ಮನೆಗೆ ನುಗ್ಗಿ ಚಿನ್ನಾಭರಣ ನಗದು ಕಳವು

23
0

ಬೆಳ್ತಂಗಡಿ; ತಾಲೂಕಿನ ಕುವೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮನೆಯಿಂದ 80,000 ಸಾವಿರ ನಗದು ಹಾಗೂ ಸುಮಾರು 66,000 ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಅಪಹರಿಸಿರುವುದಾಗಿ
ಲಲಿತ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅ 13 ರಾತ್ರಿಯ ವೇಳೆ ಮನೆಯ ಹಂಚು ತೆಗೆದು ಒಳಗೆ ನುಗ್ಗಿದ ಕಳ್ಳರು ಗೋಡ್ರೇಜಿನ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here