ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ನದಿಯ ಸೇತುವೆಯ ಬಳಿ ದೊಂಡೋಲೆ ಕ್ರಾಸ್ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಅ.18 ರಂದು ಬೆಳಿಗ್ಗೆ ನಡೆದಿದೆ.
ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಹೆಂಗಸಿನ ಮೃತದೇಹವಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಮೃತ ಮಹಿಳೆಯ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಠಾಣೆಯ ನ್ನು ಸಂಪರ್ಕಿಸಲು ಕೋರಲಾಗಿದೆ.