Home ಅಪಘಾತ ಮಹಿಳಾ ದೌರ್ಜನ್ಯದ ವಿರುದ್ದ  ಪಾದಯಾತ್ರೆ ಹೊರಟವರ ಮೇಲೆ ಹರಿದ ಟ್ರಕ್ ಬೆಳ್ತಂಗಡಿಯ ಒಬ್ಬರು ಸೇರಿ ಇಬ್ಬರು...

ಮಹಿಳಾ ದೌರ್ಜನ್ಯದ ವಿರುದ್ದ  ಪಾದಯಾತ್ರೆ ಹೊರಟವರ ಮೇಲೆ ಹರಿದ ಟ್ರಕ್ ಬೆಳ್ತಂಗಡಿಯ ಒಬ್ಬರು ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವು

0
28

ಬೆಳ್ತಂಗಡಿ : ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು ವಿರಾಮದ ವೇಳೆ ವಿಶ್ರಾಂತಿ ಪಡೆಯುತ್ತಿದ್ದ ಓಮ್ಮಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಗುಜರಾತ್ ನ ಸೂರತ್ ನಿಂದ 200 ಕಿ.ಮಿ. ದೂರದಲ್ಲಿ ಬುಧವಾರ ಮಧ್ಯಾಹ್ನ 2 ರ ಸುಮಾರಿಗೆ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರ ಪೈಕಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ನಿವಾಸಿ ಮೂಸಾ ಕುಂಞಿ ಯಾನೆ ಶರೀಫ್ ಎಂದು ಗುರುತಿಸಲಾಗಿದೆ. ಇವರೊಂದಿಗಿದ್ದ ಲಿಂಗೇ ಗೌಡ ಎಂಬವರೂ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ . ದಾರಿ ಮಧ್ಯೆ ರಸ್ತೆ ಬದಿ ಕಾರಿನಲ್ಲಿದ್ದಾಗ ಟ್ರಕ್ ಢಿಕ್ಕಿ ಹೊಡೆದು, ಮೂಸಾ ಶರೀಫ್, ಲಿಂಗೇ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಓಮ್ಮಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದು ಟ್ರಕ್ ಪರಾರಿಯಾಗಿದೆ ಎಂದು ತಿಳಿದುಬಂದಿದೆ.
ಕೆ ಆರ್.ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಸಾಮಾಜಿಕ ಹೋರಾಟಗಾರ ಮೂಸಾ ಶರೀಫ್

ಕರ್ನಾಟಕ ಸಾರಥಿಗಳ ಟ್ರೇಡ್ ಯೂನಿಯನ್ ಮುಖಂಡರು.

ದೇಶದಲ್ಲಿ ನಡೆಯುತ್ತಿರುವ ‘ಬೇಟಿ ಬಚಾವೋ ಬೇಟಿ ಪಡಾವೋ’ ಅಭಿಯಾನದ ಮಧ್ಯೆ ಕಳವಳಕಾರಿಯಾಗಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು ಮಂಗಳೂರಿನಿಂದ ದೆಹಲಿಗೆ ಅಕ್ಟೋಬರ್ 17 ರಂದು ಕಾಲ್ನಡಿಗೆ ಜಾಥಾ ಆರಂಭಿಸಿದ್ದರು.

ಮೂಸಾ ಶರೀಫ್ ಅವರ ಜೊತೆ ನೌಫಲ್ ಅಬ್ಬಾಸ್, ಬಾಲಕೃಷ್ಣ,  ಹಂಝ ಲಿಂಗೇಗೌಡ, ಮತ್ತು ಪ್ರವೀಣ್‌ ಅವರಿದ್ದರು ಎಂದು ತಿಳಿದು ಬಂದಿದೆ. ಮೂಸಾ ಶರೀಫ್ ಅವರು ಪತ್ನಿ ಮತ್ತು ಮೂವರು ಹೆಣ್ಣುಮಕ್ಕಳು, ಕುಟುಂಬದವರನ್ನು ಅಗಲಿದ್ದಾರೆ.
ಪಾದಯಾತ್ರೆ ಕುರಿತು ಪ್ರತಿನಿತ್ಯ ವೀಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ ಇವರು ಪಾದಯಾತ್ರೆ ಹೊರಟು 55 ನೇ ದಿನ ಈ ಅನಾಹುತ ಸಂಭವಿಸಿದೆ.

NO COMMENTS

LEAVE A REPLY

Please enter your comment!
Please enter your name here