

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ನಿವೃತ್ತ ಡಿಎಫ್‌ಓ, ಆಗಿದ್ದ ದಿ.ಎನ್.ಪದ್ಮನಾಭ ಮಾಣಿಂಜರವರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮ ಮಾ.15 ರಂದು ಬೆಳ್ತಂಗಡಿ ಶ್ರೀಗುರು ಸಾನಿಧ್ಯ ಸಭಾಭವನದಲ್ಲಿ ನಡೆಯಿತು.
ಬೆಂಗಳೂರು ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆರ್ಶೀವಚನ ನೀಡಿ ನಿರಂತರ ಉನ್ನತಿ ಹಾಗೂ ಒಳಿತಿನ ಚಿಂತನೆ ಮಾಡುವ ಮನಸ್ಸು ಪದ್ಮನಾಭರವರು. ಸಮಾಜದ ಬಗ್ಗೆ ಕಾಳಜಿ,ಹಿತ ಚಿಂತನೆ ಮಾಡಿದ ನಿಜವಾದ ರಾಜರ್ಷಿ ಪದ್ಮನಾಭರವರು ಎಂದರು.
ಸಂಘದ ಉಪಾಧ್ಯಕ್ಷ ಭಗೀರಥ ಜಿ. ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆಯ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಸುಧೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಸುಜಿತಾ ವಿ ಬಂಗೇರ, ಕೆ.ಪಿ.ದಿವಾಕರ, ಧರ್ಣಪ್ಪ ಪೂಜಾರಿ, ಡಾ.ರಾಜರಾಮ ಕೆ.ಬಿ, ತನುಜಾ ಶೇಖರ್, ಧರಣೇಂದ್ರ ಕುಮಾರ್, ಚಿದಾನಂದ ಪೂಜಾರಿ ಎಲ್ದಡ್ಕ, ಸಂಜೀವ ಪೂಜಾರಿ, ಚಂದ್ರಶೇಖರ್, ಗಂಗಾಧರ ಮಿತ್ತಮಾರು, ಜಯವಿಕ್ರಮ ಕಲ್ಲಾಪು, ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಉಪಸ್ಥಿತರಿದ್ದರು.
ಸಂಘದ ನಿರ್ದೇಶಕ ಜಗದೀಶ್ಚಂದ್ರ ಡಿ.ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು, ಪ್ರದೀಶ್ ನಡುವಾಲು ಕಾರ್ಯಕ್ರಮ ನಿರೂಪಿಸಿದರು, ನಿರ್ದೇಶಕ ಆನಂದ ಪೂಜಾರಿ ವಂದಿಸಿದರು.
