


ಬೆಳ್ತಂಗಡಿ; ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರಂತದಲ್ಲಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ನಿನ್ನೆ ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು , ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಎಂಬಾತ ಕಾಲು ಜಾರಿ ಬಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬನ್ನೂರು ಪೋಲಿಸರು ತೆರಳಿದ್ದು ,ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಬನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೋಲಿಸರು ತಿಳಿಸಿದ್ದಾರೆ.
