Home ಅಪರಾಧ ಲೋಕ ಬೆಳ್ತಂಗಡಿ;  ಕುಪ್ಪೆಟ್ಟಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ

ಬೆಳ್ತಂಗಡಿ;  ಕುಪ್ಪೆಟ್ಟಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ

31
0

ಬೆಳ್ತಂಗಡಿ; ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ವಿರುವ ಉಪ್ಪನಂಗಡಿ ಪೊಲೀಸರು ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ.
ಕುಪ್ಪೆಟ್ಟಿಯಲ್ಲಿ ಗೂಡ್ಸ್ ವಾಹನದಲ್ಲಿ ಜಾನುವಾರ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಪತ್ತೆ ಹಚ್ವಿದ್ದು ವಾಹನದಲ್ಲಿ ಯಾವುದೇ ದಾಖಲೆಗಳಿಲ್ಲದೆ ನಾಲ್ಕು ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು.
ಈ ಹಿನ್ನಲೆಯಲ್ಲಿ ವಾಹನ ಚಾಲಕ ಜಯಂತ್ ಗೌಡ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಬೇಕಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here