ಬೆಳ್ತಂಗಡಿ: ಕಲ್ಮಂಜ ಗ್ರಾಮದ ಗಾಂಜಾಲ್ ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಶಾಜಿ(56) ಎಂಬಾತನಾಗಿದ್ದಾನೆ. ಫೆ.20ರಂದು ಶಾಜಿ ಶಿಬಿ ಎಂಬವರ ತೋಟದಲ್ಲಿ ಕೆಲಸಕ್ಕ ಬಂದಿದ್ದ ತೋಟದಲ್ಲಿಯೇ ಆತ
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಗೆ ಕಾರಣವೇನೆಂದು ತಿಳಿದು ಬಂದಿಲ್ಲ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.