



ಬೆಳ್ತಂಗಡ; ಕೇಂದ್ರ ಸರಕಾರದ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರು ಆಗಿರುವ ಅರ್ಜುನ್ ರಾಮ್ ಮೇಘವಾಲ್ ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಧರ್ಮಸ್ಥಳ ದಲ್ಲಿ ದೇವರ ದರ್ಶನಪಡೆದ ಅವರು ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ ಇತರರು ಇದ್ದರು. ಬಳಿಕ ಅವರು ಶಾಂತಿವನಕ್ಕೂ ಭೆಟಿ ನೀಡಿದರು.

