Home ರಾಷ್ಟ್ರ/ರಾಜ್ಯ ಬೆಳ್ತಂಗಡಿ ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

ಬೆಳ್ತಂಗಡಿ ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

55
0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ

LEAVE A REPLY

Please enter your comment!
Please enter your name here