


ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಸಮಾಜಿಕ ಜಾಲತಾಣವಾದ ಇನ್ ಸ್ಟ್ರಾಗ್ರಾಂ ನಲ್ಲಿ ಬಂಟ್ವಾಳ ಹಿಂದೂ ವಾರಿಯರ್ ಎಂಬ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವಂತಹ ಹಾಗು ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ ಪೋಸ್ಟ್ ಪ್ರಸಾರ ಮಾಡಿದ್ದು ಇದರಿಂದಾಗಿ ಕಾನೂನು ಸುವ್ಯಸ್ಥೆಗೆ ಧಕ್ಕೆ ಯಾಗುವ ಸಾಧ್ಯತೆಗಳಿದ್ದು ಇದರ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ 1ರಂದು ಕಲಂ 196(1)(ಎ) 353(1)(ಸಿ) ಬಿ.ಎನ್ ಎಸ್ 2023 ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದರೆ.
