Home ರಾಷ್ಟ್ರ/ರಾಜ್ಯ ಅಹಮದಾಬಾದ್; 242ಪ್ರಯಾಣಿಕರಿದ್ದ ವಿಮಾನ ಪತನ

ಅಹಮದಾಬಾದ್; 242ಪ್ರಯಾಣಿಕರಿದ್ದ ವಿಮಾನ ಪತನ

0
10

ಅಹಮದಾಬಾದ್:‌ ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂ.12) ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.

ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ದಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನ ಅಪಘಾತಕ್ಕೀಡಾದ ಸ್ಥಳವು ವಸತಿ ಪ್ರದೇಶ ಎಂದು ವರದಿಯಾಗಿದೆ.

ವಿಮಾನ ನಿಲ್ದಾಣದ ಸಮೀಪದಲ್ಲೇ ಈ ಅಪಘಾತ ಸಂಭವಿಸಿದೆ. ಅಪಘಾತದ ಸ್ಥಳದಿಂದ ದಟ್ಟವಾದ ಹೊಗೆ ಗೋಚರಿಸಿದೆ. ಅಗ್ನಿಶಾಮಕ ದಳ ಸೇರಿದಂತೆ ತುರ್ತು ಪ್ರತಿಕ್ರಿಯೆ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ.

NO COMMENTS

LEAVE A REPLY

Please enter your comment!
Please enter your name here