Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಕೋಟಿ ಗೋಲ್ಮಾಲ್ ಪ್ರಕರಣ; ಧರ್ಮಸ್ಥಳ...

ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಕೋಟಿ ಗೋಲ್ಮಾಲ್ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು

39
0

ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟಿನಿಂದ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಂಘದ ಅಧ್ಯಕ್ಷರ ದೂರಿನಂತೆ ಇಬ್ಬರ ಸಿಬ್ಬಂದಿಗಳ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದಲ್ಲಿ 18-02-2022 ರಿಂದ 25-03-2025 ನೇ ಅವಧಿಯ ಸಂದರ್ಭದಲ್ಲಿ ಎರಡು ಕೋಟಿಯ ಹನ್ನೆರಡು ಲಕ್ಷದ ಎಂಟು ಸಾವಿರದ ಮುನ್ನೂರ ಇಪ್ಪತ್ತೆಂಟು ರೂಪಾಯಿ ಹದಿನೈದು ಪೈಸೆ (2,12,08,328,15) ಹಣವನ್ನು ಸಿಬ್ಬಂದಿಗಳಾದ ಬೆಳಾಲು ನಿವಾಸಿ ಎಲ್ಯಣ್ಣ ಪೂಜಾರಿ ಮಗ ಸದಾಶಿವ.ಓ @ ಸುಜಿತ್ ಮತ್ತು ಬೆಳಾಲು ನಿವಾಸಿ ವಾಸಪ್ಪ ಗೌಡರ ಮಗ ಪ್ರಶಾಂತ.ಬಿ ಇಬ್ಬರು ಸೇರಿಕೊಂಡು ವಿವಿಧ ಮೂಲಗಳಿಂದ ವಂಚನೆ ಮಾಡಿದ್ದರು ಅದಲ್ಲದೆ ಪ್ರಶಾಂತ.ಬಿ ಎಂಬಾತ ಸಂಘದ ಠೇವಣಿಯ ರಶೀದಿಯನ್ನು ಕಳವು ಮಾಡಿಕೊಂಡು ಹೋಗಿದ್ದ. ಈ ಸಂದರ್ಭದಲ್ಲಿ ಮೂರನೇ ಆರೋಪಿ ಬೆಳಾಲು ನಿವಾಸಿ ಎಲ್ಯಣ್ಣ ಪೂಜಾರಿ ಮಗ ಪ್ರಕಾಶ್ ಎಂಬಾತ 10 ಲಕ್ಷ ರೂಪಾಯಿ ಹಣ ಮೂರು ವರ್ಷದ ಅವಧಿಗೆ ಸಂಘದಲ್ಲಿ ಠೇವಣಿ ಇರಿಸಿ ಆ ದಿನದಂದು ಠೇವಣಿ ಆಧಾರದಲ್ಲಿ ಮೂರು ಲಕ್ಷದ ಐವತ್ತು ಸಾವಿರ (3,50,000) ರೂಪಾಯಿ ಹಣ ಸಾಲವಾಗಿ ಪಡೆದುಕೊಂಡಿದ್ದ.‌ 28-04-2025 ರಂದು ಒಂದು ಸುಳ್ಳು ಅರ್ಜಿ ಸಂಘಕ್ಕೆ ಸಲ್ಲಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿ ಪೂರ್ತಿ ಠೇವಣಿ 10 ಲಕ್ಷ ರೂಪಾಯಿ ಬಡ್ಡಿ ಸಹಿತ ನನಗೆ ಮರುಪಾವತಿಸುವಂತೆ ಕೋರಿ ಅರ್ಜಿ ಸಲ್ಲಸಿದ್ದ. ನಿಜ ವಿಚಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿ ಹೇಳಿದರೂ ಪ್ರಕಾಶ ಕೇಳದೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿರುವುದಲ್ಲದೆ ನಂತರ ಪದೆ ಪದೆ ಸಂಘದ ಕಚೇರಿಗೆ ಬಂದು ಸಿಬ್ಬಂದಿಗಳಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕುತ್ತಿದ್ದ ಎಂದು ಸಂಘದ ಅಧ್ಯಕ್ಷರಾದ ಪದ್ಮನಾಭ ಗೌಡ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೇ.31 ರಂದು ಸದಾಶಿವ.ಓ@ಸುಜಿತ್ , ಪ್ರಶಾಂತ.ಬಿ, ಪ್ರಕಾಶ್ ವಿರುದ್ಧ ಕಲಂ -314,316(4),318(3),336(3),306,352,351(2),R/W 3(5) BNS 2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ಸಿಬ್ಬಂದಿ ಸಂಘದಿಂದ ಅಮಾನತು: ಇಬ್ಬರು ಸಿಬ್ಬಂದಿ ಸದಾಶಿವ @ ಸುಜಿತ್ ಮತ್ತು ಪ್ರಶಾಂತ್ ನನ್ನು ಮೇ ತಿಂಗಳಲ್ಲಿ ನಿರ್ದೇಶಕರು ಸೇರಿ ತನಿಖೆ ಮುಗಿಯುವವರೆಗೆ ಅಮಾನತು ಮಾಡಿದ್ದಾರೆ.

LEAVE A REPLY

Please enter your comment!
Please enter your name here